ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ಕಾಂಗ್ರೆಸ್ ನೇತೃತ್ವದ 16 ಪ್ರತಿಪಕ್ಷಗಳು ನಿರ್ಧಾರ ಕೈಗೊಂಡಿದೆ.
3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ದೇಶಾದ್ಯಂತ ರೈತರು ಕೈಗೊಂಡಿರುವ ಹೋರಾಟಕ್ಕೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ಕಾಂಗ್ರೆಸ್ ನೇತೃತ್ವದ 16 ಪ್ರತಿಪಕ್ಷಗಳು ತೀರ್ಮಾನಿಸಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯಸಭೆ ಸದಸ್ಯ ಗುಲಾಂ ನಬೀ ಆಜಾದ್ ತಿಳಿಸಿದ್ದಾರೆ.
ಜನವರಿ 26 ರಂದು ನಡೆದ ಘಟನೆಯ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿರುವ ಬಗ್ಗೆ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ರಾಷ್ಟ್ರಪತಿಗಳು ಪಕ್ಷತೀತವಾಗಿ ಇರುವ ವ್ಯಕ್ತಿಯಾಗಿದ್ದು, ಅವರ ಭಾಷಣ ಬಹಿಷ್ಕರಿಸುವುದು ದುರಾದೃಷ್ಟಕರ. ನಿರ್ಧಾರ ಪರಿಶೀಲಿಸಬೇಕೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ.