alex Certify ಗ್ಯಾರಂಟಿ ಭಾರದಿಂದ ರಾಜ್ಯದ ಜನತೆಗೆ ತೆರಿಗೆ ಹೆಚ್ಚಳ ಶಾಕ್: ಸುಳಿವು ನೀಡಿದ ಸಚಿವ ಹೆಚ್.ಕೆ. ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾರಂಟಿ ಭಾರದಿಂದ ರಾಜ್ಯದ ಜನತೆಗೆ ತೆರಿಗೆ ಹೆಚ್ಚಳ ಶಾಕ್: ಸುಳಿವು ನೀಡಿದ ಸಚಿವ ಹೆಚ್.ಕೆ. ಪಾಟೀಲ್

ಕಾರವಾರ: ಗ್ಯಾರಂಟಿ ಯೋಜನೆಯಿಂದ ಭಾರ ಹೆಚ್ಚಿದೆ. ಹೀಗಾಗಿ ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ಹೆಚ್ಚಳ ಮಾಡಬಹುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸುಳಿವು ನೀಡಿದ್ದಾರೆ.

ಉತ್ತರಕನ್ನಡ ಜಿಲ್ಲೆ ಶಿರಸಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ನಮಗೆ ಭಾರ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಣಾಕ್ಷತೆಯಿಂದ ಿದನ್ನು ನೀಗಿಸುತ್ತಿದ್ದಾರೆ. ಹಲವು ಮೂಲಗಳಿಂದ ಹೆಚ್ಚು ಹಣ ಸಂಗ್ರಹಿಸುವ ಮೂಲಕ ಆರ್ಥಿಕ ಭಾರ ಸರಿದೂಗಿಸಲು ಪ್ರಯತ್ನಿಸುತ್ತಿದ್ದೇವೆ. ಹೀಗಾಗಿ ಈ ಬಾರಿ ಬಜೆಟ್ ನಲ್ಲಿ ತೆರಿಗೆ ಹೆಚ್ಚಳ ಮಾಡಬಹುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...