alex Certify BUDJET BREAKING : ಶಿಕ್ಷಣದ ಮೂಲಕ ಬದಲಾವಣೆಗೆ ಮುನ್ನುಡಿ : ರಾಜ್ಯ ಸರ್ಕಾರದಿಂದ ಹಲವು ಮಹತ್ವದ ಘೋಷಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BUDJET BREAKING : ಶಿಕ್ಷಣದ ಮೂಲಕ ಬದಲಾವಣೆಗೆ ಮುನ್ನುಡಿ : ರಾಜ್ಯ ಸರ್ಕಾರದಿಂದ ಹಲವು ಮಹತ್ವದ ಘೋಷಣೆ.!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಹಲವು ಮಹತ್ವದ ಕೊಡುಗೆ ಘೋಷಿಸಿದ್ದಾರೆ.

•ಎಡಿಬಿ ನೆರವಿನಲ್ಲಿ 12,500 ಕೋಟಿ ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸಲು ಕ್ರಮ
• ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಯೋಜನೆ 5 ಸಾವಿರ ಶಾಲೆಗಳಿಗೆ ವಿಸ್ತರಣೆ
•೧ ಪ್ರಾಥಮಿಕ ಹಂತದಿಂದ ಪಿಯು ಹಂತದವರೆಗಿನ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ನೀಡುತ್ತಿರುವ ಮಾಸಿಕ ಗೌರವಧನ ತಲಾ ₹2 ಸಾವಿರ ಹೆಚ್ಚಳ
•ಬಿಸಿಯೂಟ ತಯಾರಿಕೆ ಸಿಬ್ಬಂದಿ ಗೌರವಧನ ₹1 ಸಾವಿರ ಹೆಚ್ಚಳ
• ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು 4 ಸಾವಿರ ಶಾಲೆಗಳಲ್ಲಿ ದ್ವಿಭಾಷಾ ವಿಭಾಗ ಪ್ರಾರಂಭ
•ಶಾಲೆ-ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ₹725 ಕೋಟಿ ಹಾಗೂ ಪೀಠೋಪಕರಣ ಒದಗಿಸಲು ₹50 ಕೋಟಿ ಬಿಡುಗಡೆ
ಸುಶಿಕ್ಷಿತ ಸಮಾಜ ನಿರ್ಮಾಣದ ಸಂಕಲ್ಪ
• ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ₹2,500 ಕೋಟಿ ವೆಚ್ಚದ ಯೋಜನೆ ಜಾರಿ
• ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಎಂದು ಮರುನಾಮಕರಣ
26 ಸರ್ಕಾರಿ ಮಹಿಳಾ ಕಾಲೇಜುಗಳು ಸೇರಿದಂತೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಪದವಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ₹301 ಕೋಟಿ ಅನುದಾನ. ಹೊಸದಾಗಿ ಪ್ರಾರಂಭಿಸಿದ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಿಗೆ ₹10 ಕೋಟಿ ನೆರವು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...