ಬೆಂಗಳೂರು : ಪ್ರಸ್ತುತ ವಿಚಾರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ನಟ ಕಿಶೋರ್ ಇದೀಗ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ಬೆನ್ನಲ್ಲೇ ಹೊಸ ಪೋಸ್ಟ್ ಒಂದನ್ನು ಮಾಡಿದ್ದಾರೆ.
ಈ ಬಗ್ಗೆ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಬರೆದುಕೊಂಡ ನಟ ಕಿಶೋರ್ ‘ಮಂದಿರ, ರಾಜರು ಮತ್ತು ರಾಜಕೀಯ ನಿಯಂತ್ರಣ…ನಾವು ನೋಡದ್ದೇನಲ್ಲ..ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ…..ದೇವರ ಹೆಸರಲ್ಲಿ ಪೂಜಾರಿಯೊಂದಿಗೆ ಸೇರಿ ಜನರನ್ನು ನಿಯಂತ್ರಿಸಿ, ದೇಗುಲ ಕಟ್ಟಿಸಿ, ತಮ್ಮ ಹೆಸರು ಕೆತ್ತಿಸಿ, ದೇಗುಲದ ಶಿಲ್ಪಿಯ ಕೈ ಕತ್ತರಿಸಿ, ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿ, ಅಜರಾಮರರಾದ ದೊರೆಗಳು..…ಉಧೋ ಉಧೋ ಎಂದ ಪ್ರಜೆಗಳು, ಭಟ್ಟಂಗಿಗಳು … ಧರ್ಮ ಮತ್ತು ದೇವರು ರಾಜಕಾರಿಣಿಗಳ ಕೈಗೆ ಹೋಗಿ ತಾವೂ ಪ್ರಶ್ನಾತೀತವಾಗಿ ಅವರನ್ನೂ ಪ್ರಶ್ನಾತೀತರನ್ನಾಗಿಸಿಬಿಡುವುದು ಸಂಸ್ಕೃತಿಯ ಚಲನಶೀಲತೆಗೆ, ನಾಡಿನ ಭವಿಷ್ಯಕ್ಕೆ ಅತೀ ಅಪಾಯಕಾರಿ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಕಿಶೋರ್ ಗೆ ಪೋಸ್ಟ್ ಗೆ ತರಹೇವಾರಿ ಕಮೆಂಟ್ ಗಳು ಬರುತ್ತಿದೆ.
![](https://kannadadunia.com/wp-content/uploads/2024/01/kishore.png)