ಮಂಗಳೂರು: ಅಪಾರ್ಟ್ ಮೆಂಟ್ ಕಟ್ಟಡದ ಮೇಲಿನಿಂದ ಹಾರಿ ಬಿಲ್ಡರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.
ಮೋಹನ್ ಅಮೀನ್ ಆತ್ಮಹತ್ಯೆ ಮಾಡಿಕೊಂಡಿರುವ ಬಿಲ್ಡರ್. ಮಂಗಳೂರಿನ ಬೆಂದೂರುವೆಲ್ ನಲ್ಲಿರುವ ಅಟ್ಲಾಂಟಿಕ್ ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೋಹನ್ ಅಮೀನ್ ಮಂಗಳೂರಿನಲ್ಲಿ ಹಲವು ಅಪಾರ್ಟ್ ಮೆಂಟ್ ಗಳನ್ನು ನಿರ್ಮಿಸಿದ್ದರು. ಇದೀಗ ಏಕಾಏಕಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೋಹನ್ ಅಮೀನ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.