
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಲ್ಡರ್ ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಹಲವು ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೆ.ಆರ್.ಪುರಂ, ಕೊಡಿಗೇಹಳ್ಳಿ ಸೇರಿದಂತೆ 20ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ಬಿಲ್ಡರ್ ಗಳ ಮನೆ, ಕಚೇರಿಗಳ ಮೇಳೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.