
ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆಯಲಾಗಿದೆ.
ಮೂವರು ಕೂಲಿ ಕಾರ್ಮಿಕರನ್ನು ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅವಶೇಷಗಳಡಿ ಸಿಲುಕಿರುವ ಉಳಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಅವಘಡ ಸಂಭವಿಸಿದೆ. 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ 16 ಕಾರ್ಮಿಕರು ಸಿಲುಕಿದ್ದಾರೆನ್ನಲಾಗಿದೆ. ಇವರಲ್ಲಿ ಮೂವರನ್ನು ರಕ್ಷಿಸಲಾಗಿದೆ. ಮೂವರು ಮೃತಪಟ್ಟಿದ್ದಾರೆ. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.