ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ ಒಂದು ಭಾಗ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಅವಘಡದಲ್ಲಿ ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯದ ಎನ್.ಟಿ.ಟಿ.ಎಫ್. ಮುಖ್ಯರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ ಸಂಭವಿಸಿದೆ. ಕಲಬುರಗಿಯ ವೀರೇಶ್ ಮತ್ತು ಯಾದಗಿರಿಯ ಹಿಮಾಂಶ್ ಮೃತಪಟ್ಟ ಕಾರ್ಮಿಕರು ಎಂದು ಹೇಳಲಾಗಿದೆ.
ಗಾಯಗೊಂಡ ಮತ್ತೊಬ್ಬ ಕಾರ್ಮಿಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಡಿಎಸ್ ಮುಖಂಡರೊಬ್ಬರಿಗೆ ಸೇರಿದ ಕಟ್ಟಡ ಇದಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.