ಬೆಂಗಳೂರಿನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಇಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗೆ ಆದೇಶ ಹೊರಡಿಸಲಾಗಿದೆ. ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಆದೇಶ ಹೊರಡಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ಕಟ್ಟಡಗಳಿಗೆ ಕಟ್ಟಡ ಉಪನಿಧಿ -2003, ಪರಿಷ್ಕೃತ ವಲಯ ನಿಯಮಾವಳಿಗಳು -2015 ನ್ಯಾಷನಲ್ ಬಿಲ್ಡಿಂಗ್ ಕೋಡ್ ಆಫ್ ಇಂಡಿಯಾ -2016 ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣ ಪತ್ರ ಸ್ವಾಧೀನಾನುಭವ ಪ್ರಮಾಣಪತ್ರಗಳನ್ನು ಪಡೆದ ನಂತರ ಕಟ್ಟಡಗಳ ಬಾಲ್ಕನಿ ಸಂಪೂರ್ಣವಾಗಿ ಮುಚ್ಚುವುದು, ಇನ್ನಿತರ ಸುರಕ್ಷತಾ ಕಟ್ಟಡ ಮಾರ್ಪಾಡಿಗೆ ಅವಕಾಶ ಇರುವುದಿಲ್ಲ. ಕಟ್ಟಡ ಮಾಲೀಕರು ನಿಯಮಬಾಹಿರವಾಗಿ ಸುರಕ್ಷತೆಗೆ ಕಾರಣರಾಗುತ್ತಾರೆ ಎನ್ನಲಾಗಿದ್ದು, ಈ ಕಾರಣಕ್ಕೆ ಸುರಕ್ಷತೆ ದೃಷ್ಠಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗೆ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.