
ಬೆಂಗಳೂರು: ಬೆಂಗಳೂರಿನಲ್ಲಿ ಪಿಜಿ ಕಟ್ಟಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಕಲಬುರಗಿ ಮೂಲದ ಸುಮಾರು 28 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಹುಡುಕಿಕೊಂಡು ಬಂದಿದ್ದ ಯುವಕ ಎಲ್ಲೂ ಕೂಡ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವೈಟ್ ಫೀಲ್ಡ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.