alex Certify SHOCKING: ಕೆಲಸದ ವೇಳೆಯಲ್ಲೇ ಅವಘಡ, 17 ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕೆಲಸದ ವೇಳೆಯಲ್ಲೇ ಅವಘಡ, 17 ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಜಿಂದಾಲ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. 17ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು ಕಂಡ ಘಟನೆ ನಡೆದಿದೆ.

ಉತ್ತರಪ್ರದೇಶ ಮೂಲದ ನಜೀಮುದ್ದೀನ್ (44) ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ಮೆಟಲ್ ವಿಂಡೋಸ್ ಅಳವಡಿಸುವಾಗ ದುರ್ಘಟನೆ ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲು ಬಳಿ ಇರುವ ಪ್ರಸ್ಟೀಜ್ ಜಿಂದಾಲ್ ಸಿಟಿಯಲ್ಲಿ ಘಟನೆ ನಡೆದಿದ್ದು ಜಿಂದಾಲ್ ಸಿಟಿ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮೇಲ್ವಿಚಾರಕ ರಾಹುಲ್ ಮತ್ತು ಗುತ್ತಿಗೆದಾರನ ವಿರುದ್ಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 22ರಂದು ನಡೆದ ಘಟನೆಯಲ್ಲಿ ಕಾರ್ಮಿಕ ಆರನೇ ಮಹಡಿಯಿಂದ ಬಿದ್ದು ಬಾಕೇಂದ್ರ ಎಂಬ ಕಾರ್ಮಿಕ ಸಾವನ್ನಪ್ಪಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...