BREAKING: ಭಾರೀ ಮಳೆಗೆ ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

ಉತ್ತರ ಪ್ರದೇಶದ ಬುಲಂದ್‌ ಶಹರ್‌ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದರ ಛಾವಣಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಅವಘಡದಲ್ಲಿ ಕುಟುಂಬದ 12 ಮಂದಿ ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಬುಲಂದ್‌ ಶಹರ್‌ ನ ನರಸೇನಾ ಪೊಲೀಸ್ ಠಾಣೆ ವ್ಯಾಪ್ತಿಯ ಮಾವಾಯಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಕುಟುಂಬ ಸದಸ್ಯರನ್ನು ಸ್ಥಳಾಂತರ ಮಾಡಲಾಗಿದೆ. ಭಾರಿ ಮಳೆಯ ಕಾರಣ ಮನೆಯ ಛಾಣಿ ತೇವಗೊಂಡಿದ್ದು, ಮನೆಯವರೆಲ್ಲ ಮಲಗಿದ್ದ ವೇಳೆಯಲ್ಲೇ ದುರಂತ ಸಂಭವಿಸಿದೆ.

ನಿನ್ನೆಯಷ್ಟೇ ಮನೆಯ ಮೇಲಿನ ಮಹಡಿಯಲ್ಲಿ ಲಿಂಟರ್ ಹಾಕಲಾಗಿತ್ತು. ಕುಟುಂಬ ನೆಲ ಮಹಡಿಯಲ್ಲಿ ಮಲಗಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಗೆ ಲಿಂಟರ್ ನೀರಿನ ಭಾರದಿಂದ ಕುಸಿದು ಬಿದ್ದಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read