alex Certify ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ: ಹೋರಿ ತಿವಿದು ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ: ಹೋರಿ ತಿವಿದು ಯುವಕ ಸಾವು

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ಪುನೀತ್ ಆಚಾರ್(19) ಮೃತಪಟ್ಟ ಯುವಕ ಎಂದು ಹೇಳಲಾಗಿದೆ.

ಶಿಕಾರಿಪುರ ಪಟ್ಟಣದ ಹಾಸ್ಟೆಲ್ ನಲ್ಲಿದ್ದು, ಐಟಿಐ ಕಾಲೇಜಿನಲ್ಲಿ ಓದುತ್ತಿದ್ದ ಪುನೀತ್ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ.

ಹೋರಿ ತಿವಿದು ಗಂಭೀರವಾಗಿ ಗಾಯಗೊಂಡಿದ್ದ ಪುನೀತ್ ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುವ ಮಾರ್ಗ ಮಧ್ಯ ಸಾವನ್ನಪ್ಪಿದ್ದಾನೆ. ಹೋರಿ ಬೆದರಿಸುವ ಸ್ಪರ್ಧೆ ಆಯೋಜಕರು ವಿರುದ್ಧ ಪುನೀತ್ ಅವರ ತಂದೆ ಗಜೇಂದ್ರ ಆಚಾರ್ ಶಿಕಾರಿಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...