ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಬುಲ್ಡೋಜರ್ ಸದ್ದು ಮಾಡಿದ್ದು, ಬಿಡಿಎ (ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ) 200 ಕ್ಕೂ ಹೆಚ್ಚು ಮನೆ ನೆಲಸಮ ಮಾಡಿದೆ.
ಗೊರಗುಂಟೆಪಾಳ್ಯದ ಆಶ್ರಯ ಬಡಾವಣೆಯಲ್ಲಿ ಸುಮಾರು 200 ಕ್ಕೂ ಹೆಚ್ಚು ಮನೆ ನೆಲಸಮ ಮಾಡಿದೆ.ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆಗಳನ್ನು ಬಿಡಿಎ ನೆಲಸಮ ಮಾಡಿದೆ. ಹಾಗೂ ಜಾಗ ಖಾಲಿ ಮಾಡುವಂತೆ ಜನರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಯಾವುದೇ ನೋಟಿಸ್ ನೀಡದಂತೆ ಏಕಾಏಕಿ ನಮ್ಮ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ನಿವಾಸಿಗಳು ಬಿಡಿಎ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.