ನಾಳೆ ಭಾರತ ಹಾಗೂ ಐರ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿಯ ಮೂರನೇ ಪಂದ್ಯ ಡಬ್ಲಿನ್ ನಲ್ಲಿ ನಡೆಯಲಿದ್ದು, ಭಾರತ ತಂಡ ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿದೆ.
ಮೂರು ಪಂದ್ಯಗಳಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಸರಣಿ ಕೈ ವಶ ಮಾಡಿಕೊಂಡಿರುವ ಭಾರತ ತಂಡದ ಬೌಲಿಂಗ್ ದಾಳಿಗೆ ಐರ್ಲೆಂಡ್ ತತ್ತರಿಸಿ ಹೋಗುತ್ತಿದೆ.
ಕಳೆದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್, ಶಿವಂ ದುಬೆ, ಹಾಗೂ ರಿಂಕು ಸಿಂಗ್ ಭರ್ಜರಿ ಪ್ರದರ್ಶನ ತೋರಿದ್ದು, ಐಪಿಎಲ್ ನಂತೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲೂ ಯುವ ಪ್ರತಿಭೆಗಳು ಮಿಂಚುತ್ತಿದ್ದಾರೆ.
ಮೊದಲ ಪಂದ್ಯದಲ್ಲಿ ರಿಂಕು ಸಿಂಗ್ ಗೆ ಬ್ಯಾಟಿಂಗ್ ಸಿಗಲಿಲ್ಲ ಎಂದು ಬೇಸರಗೊಂಡಿದ್ದ ಅವರ ಅಭಿಮಾನಿಗಳಿಗೆ ಎರಡನೇ ಪಂದ್ಯ ಸಂತಸ ತಂದಿದೆ. ಮೂರನೇ ಪಂದ್ಯದಲ್ಲೂ ರಿಂಕು ಸಿಂಗ್ ಗೆ ಬೇಗ ಬ್ಯಾಟಿಂಗ್ ಸಿಗಲಿ ಎಂಬುದು ಅವರ ಅಭಿಮಾನಿಗಳ ಆಶಯವಾಗಿದೆ.