
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹೊರೆಯಾಗುತ್ತಿರುವುದು ನಿಜ. ಅದು ಗೊತ್ತಿದ್ದೇ ನಾವು ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ಬಡವರಿಗಾಗಿ ಆಗುವ ಈ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ಗ್ಯಾರಂಟಿ ಯೋಜನೆ ಸೌಲಭ್ಯ ಕಲ್ಪಿಸಬೇಕು ಎಂದು ತುರುವೇಕೆರೆ ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಸಲಹೆ ನೀಡಿದ್ದಾರೆ. ವಿಪಕ್ಷಗಳು ಸಲಹೆಗಳನ್ನು ನೀಡಿದರೆ ಸರ್ಕಾರ ಚರ್ಚೆಗೆ ಮುಕ್ತವಾಗಿದೆ ಎಂದು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬಿಜೆಪಿಯವರಿಗೆ ಬೇಕಾಗಿಲ್ಲ. ಹೇಗಾದರೂ ಮಾಡಿ ಯೋಜನೆಗಳನ್ನು ಹತ್ತಿಕ್ಕಲು ಅವರು ಯತ್ನಿಸುತ್ತಿದ್ದಾರೆ ಎಂದು ಪರಮೇಶ್ವರ್ ಆರೋಪಿಸಿದ್ದಾರೆ.