
ಚಿತ್ರದುರ್ಗ: ಡಿವೈಡರ್ ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಳ್ಳಿಯಲ್ಲಿ ನಡೆದಿದೆ.
ರಸ್ತೆ ವಿಭಜಕಕ್ಕೆ ಬಸ್ ಡಿಕಿಯಾಗಿ ಪಲ್ಟಿಯಾಗಿ ಬಿದ್ದಿದೆ. 10 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಚಳ್ಳಕೆರೆ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.