
ಬೆಳಗಾವಿ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಲಿಂಗದಹಳ್ಳಿ-ಅರವಳ್ಳಿ ಗ್ರಾಮದ ಬಳಿ ನಡೆದಿದೆ.
ಏಣಗಿ ಗ್ರಾಮದಿಂದ ಬೈಲಹೊಂಗಲದ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ಅಲ್ಲಿ 20ಕ್ಕೂ ಹೆಚ್ಚು ಪ್ರಯಣಿಕರಿದ್ದರು. ಅರಹಳ್ಳಿ ಬಳಿ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೈಲಹೊಂಗಲ ಆಸ್ಪತ್ರೆಗೆ ದಖಲಿಸಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.