ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕಣಿವೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಹೊಳಲ್ಕೆರೆ ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, ನಾಲ್ವರು ಪ್ರಯಾಣಿಕರು ಮೃತಪಟ್ಟು 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಂಟು ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹೊಳಲ್ಕೆರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶವಗಾರಕ್ಕೆ ರವಾನಿಸಲಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಅಪಘಾತಕ್ಕೆ ಕಾರಣವೆಂದು ಆರೋಪಿಸಲಾಗಿದೆ.