ಕೊಪ್ಪಳ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಶಾಲಾ ಬಾಲಕಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ಪಟ್ಟಣದಲ್ಲಿ ನಡೆದಿದೆ.
ಜನತಾ ಕಾಲೋನಿ ನಿವಾಸಿ 8 ವರ್ಷದ ಸಾನ್ವಿ ಮೃತಪಟ್ಟ ಬಾಲಕಿ ಎಂದು ಹೇಳಲಾಗಿದೆ. ಸಂಬಂಧಿ ಜೊತೆಗೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ಬಸ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಸಾನ್ವಿ ಬಸ್ ಚಕ್ರಕ್ಕೆ ಸಿಲುಕಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.