alex Certify ಚಲಿಸುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿ: 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿ: 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಬ್ರೇಕ್ ಫೇಲ್ ಆಗಿ ರಾಜಹಂಸ ಬಸ್ ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಸಮೀಪ ನಡೆದಿದೆ.

ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್ ಬ್ರೇಕ್ ಫೇಲಾಗಿದ್ದು, ತಿಮ್ಮಾಪುರ ಕ್ರಾಸ್ ಬಳಿ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ನಂತರ ಪಲ್ಟಿಯಾಗಿದೆ. ಸ್ಥಳೀಯರು ಧಾವಿಸಿ ಬಂದು ಬಸ್ ನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಬಸ್ ನ ಗಾಜು ಒಡೆದು ಒಳಗಿದ್ದವರನ್ನು ರಕ್ಷಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...