
ಹಾವೇರಿ: ಮೋಟೆಬೆನ್ನೂರು ಸಮೀಪ ಖಾಸಗಿ ಬಸ್ ಪಲ್ಟಿಯಾಗಿ 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಗಾಯಾಳುಗಳನ್ನು ಬ್ಯಾಡಗಿ ತಾಲೂಕು ಮತ್ತು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.