ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೆಗ್ಗನಹಳ್ಳಿ ಸಮೀಪ ನಡೆದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಶಿರಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ನಾಗಶ್ರೀ ಟೂರ್ಸ್ ಅಂಡ್ ಟ್ರಾವೆಲ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿದೆ. ಅಪಘಾತ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಇದಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.