ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. 100 ಅಡಿ ಆಳದ ಕಂದಕಕ್ಕೆ ಬಸ್ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
22 ಪ್ರಯಾಣಿಕರಿದ್ದ ಬಸ್ ಪೌರಿ ಜಿಲ್ಲೆಯ ಶ್ರೀನಗರ್ ಪ್ರದೇಶದಲ್ಲಿರುವ ದಹಲ್ ಚೋರಿಯಲ್ಲಿ ಅಪಘಾತಕ್ಕೀಡಾಗಿದೆ. 100 ಅಡಿ ಕಂದಕಕ್ಕೆ ಬಸ್ ಬಿದ್ದಿದ್ದು, ಐವರು ಸಾವನ್ನಪ್ಪಿದ್ದಾರೆ. 17 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. 10 ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಪೌರಿ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.