
ಮಂಗಳೂರು: ಖಾಸಗಿ ಬಸ್ ಹಾಗು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗು ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ತೋಡಾರ್ ಬಳಿ ನಡೆದಿದೆ.
ಓವರ್ ಟೇಕ್ ಮಾಡಲು ಹೋಗಿ ಬಸ್ ಅಕ್ಟ್ವಿವಾ ಬೈಕ್ ಗೆ ಗುದ್ದಿದೆ. ಪರಿಣಾಮ ತಾಯಿ-ಮಗಳು ಗಾಯಗೊಂಡಿದ್ದಾರೆ. ತೊಡಾರ್ ಮೈಟ್ ಕಾಲೇಜು ಬಳಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಖಂಡಿಸಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಬಸ್ ನ ಗಾಜು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.