
ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಸಾಗರ್ ಬೈಚದಾಳ್ (21) ಹಾಗೂ ಸುದೀಪ್ ಗುದ್ದಿ(31) ಮೃತ ದುರ್ದೌವಿಗಳು. ವಿಜಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬಸವನಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.