
ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸ್ಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಕೇರಳ ಮೂಲದ ವಿದ್ಯಾರ್ಥಿಗಳು ಚಿತ್ರದುರ್ಗದಲ್ಲಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದರು. ಬೈಕ್ ನಲ್ಲಿ ತೆರಳುತ್ತಿದ್ದಗ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
22 ವರ್ಷದ ಯಾಸೀನ್ ಹಾಗೂ ಅಲ್ತಾಫ್ ಮೃತ ಯುವಕರು. ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.