
ಚಾಮರಾಜನಗರ: ಚಲಿಸುತ್ತಿದ್ದ ಬಸ್ ಏಕಾಏಕಿ ಕಾರಿನ ಮೇಲೆ ಪಲ್ಟಿಯಾಗಿ ಬಿದ್ದು, 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭ್ರಮರಾಂಭ ಹೆಸರಿನ ಖಾಸಗಿ ಬಸ್, ರಾಂಪುರದಿಂದ ತಮಿಳುನಾಡಿನ ಕಡೆಗೆ ತೆರಳುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಬಸ್ ಒಡೆಯರ ಪಾಳ್ಯದಿಂದ ಕೊಳ್ಳೆಗಾಲ ಕಡೆಗೆ ತೆರಳುತ್ತಿತ್ತು.
ಹೊಸದೊಡ್ಡಿ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ಪಕ್ಕದಲ್ಲಿ ಸಾಗುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಘಟನೆಯಲ್ಲಿ ಕಾರು ಹಾಗೂ ಬಸ್ ನಲ್ಲಿದ್ದವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹೋಲಿ ಕ್ರಾಸ್ ಆಸ್ಪತ್ರೆ ಹಾಗೂ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.