alex Certify ಬಸ್, ಕಂಟೈನರ್ ನಡುವೆ ಅಪಘಾತ – 8ಕ್ಕೂ ಅಧಿಕ ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್, ಕಂಟೈನರ್ ನಡುವೆ ಅಪಘಾತ – 8ಕ್ಕೂ ಅಧಿಕ ಮಂದಿಗೆ ಗಾಯ

ಬೆಂಗಳೂರು : ಸಾರಿಗೆ ಬಸ್ ಹಾಗೂ ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 8ಕ್ಕೂ ಅಧಿಕ ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹೊಸೂರಿಗೆ ತೆರಳುತ್ತಿದ್ದ ಕಂಟೈನರ್ ಹಾಗೂ ಸೇಲಂಗೆ ಹೊರಟಿದ್ದ ಕೆ.ಎಸ್.‌ಆರ್.ಟಿ.ಸಿ. ಬಸ್ ಮಧ್ಯೆ ಅಪಘಾತವಾಗಿದ್ದು, ಈ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕಂಟೈನರ್ ನ ಹಿಂಬದಿ ಚಲಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದ್ದರಿಂದಾಗಿ ಬಸ್ ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಬಸ್ ನಲ್ಲಿದ್ದವರ ಪೈಕಿ 10 ಜನರಿಗೆ ಗಾಯವಾಗಿದ್ದು, ಈ ಪೈಕಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ಹತ್ಯೆಗೈದ ಪತಿ..!

ಗಾಯಾಳುಗಳನ್ನು ಕೂಡಲೇ ಶ್ರೀಸಾಯಿ ಹಾಗೂ ಆಕ್ಸಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕ ಆಗಮಿಸಿದ ಅತ್ತಿಬೆಲೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...