alex Certify Shocking: ನಿಯಂತ್ರಣ ತಪ್ಪಿ ರಸ್ತೆ ಬದಿ ಅಂಗಡಿಗೆ ನುಗ್ಗಿದ ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ನಿಯಂತ್ರಣ ತಪ್ಪಿ ರಸ್ತೆ ಬದಿ ಅಂಗಡಿಗೆ ನುಗ್ಗಿದ ಬಸ್

ಚಾಲಕನ ನಿಯಂತ್ರಣ ತಪ್ಪಿದ ಬಸ್ ಒಂದು ರಸ್ತೆ ಬದಿಯ ಅಂಗಡಿಗೆ ನುಗ್ಗಿರುವ ಘಟನೆ ಪಂಜಾಬ್ ನ ಬಾಂಗ ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದ್ದು, ಬಸ್ ನಲ್ಲಿದ್ದ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್ ಅಂಗಡಿಗೆ ನುಗ್ಗಿದ ಸಂದರ್ಭದಲ್ಲಿ ಅದೃಷ್ಟವಶಾತ್ ಅಲ್ಲಿ ಯಾವುದೇ ಗ್ರಾಹಕರು ಇರಲಿಲ್ಲವೆಂದು ಹೇಳಲಾಗಿದೆ. ಆದರೆ ಬಸ್ ನಲ್ಲಿದ್ದ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತವಾಗುತ್ತಿದ್ದಂತೆ ಬಸ್ ಚಾಲಕ ಪರಾರಿಯಾಗಿದ್ದು, ಪೊಲೀಸರ ಮುಂದೆ ಹೇಳಿಕೆ ನೀಡಿರುವ ಕಂಡಕ್ಟರ್ ಚಾಲನೆ ಮಾಡುತ್ತಿದ್ದಾಗ ಚಾಲಕ ಕಾಳಸಿಂಗ್ ಅಸ್ವಸ್ಥಗೊಂಡಂತೆ ಕಂಡುಬಂದಿದ್ದರು. ಇನ್ನೇನು ಬಸ್ ನಿಲ್ಲಿಸಬೇಕೆಂಬ ಸಂದರ್ಭದಲ್ಲಿ ಏಕಾಏಕಿ ನಿಯಂತ್ರಣ ತಪ್ಪಿ ಅಂಗಡಿಗೆ ಡಿಕ್ಕಿ ಹೊಡೆಯಿತು ಎಂದಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...