ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ತೈಲದ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ಸಾರಿಗೆ ಸಂಸ್ಥೆಗಳಿಂದ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾವನೆ ಬಂದಿದೆ. ಕೊರೋನಾ ಮತ್ತು ನೈಸರ್ಗಿಕ ವಿಕೋಪದಿಂದ ಜನ ತೊಂದರೆಗೆ ಒಳಗಾಗಿದ್ದು, ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಹೀಗಾಗಿ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.