alex Certify ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ದೀಪಾವಳಿ ಹಬ್ಬಕ್ಕೆ ವಿಶೇಷ ರಿಯಾಯ್ತಿ, ಹೆಚ್ಚಿನ ಬಸ್ ಕಾರ್ಯಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ದೀಪಾವಳಿ ಹಬ್ಬಕ್ಕೆ ವಿಶೇಷ ರಿಯಾಯ್ತಿ, ಹೆಚ್ಚಿನ ಬಸ್ ಕಾರ್ಯಾಚರಣೆ

ಕಲಬುರಗಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನವೆಂಬರ್ 14 ರ ನರಕ ಚತುರ್ದಶಿ, ನ.15 ರ ದೀಪಾವಳಿ ಅಮಾವಾಸ್ಯೆ ಹಾಗೂ ನವೆಂಬರ್ 16 ರಂದು ಬಲಿಪಾಡ್ಯಮಿ ಇರುವ ಪ್ರಯುಕ್ತ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಜಿಲ್ಲೆಗಳಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಅಗತ್ಯಕ್ಕೆ ತಕ್ಕಂತೆ ಸುಮಾರು 220 ಸಾರಿಗೆ ಬಸ್‍ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.

ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಿಂದ ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ದಾವಣಗೆರೆ ನಗರಗಳ ನಡುವೆ ಜನದಟ್ಟಣೆ ನಿರೀಕ್ಷಿಸಿ ಕಾರ್ಯಾಚರಣೆಗೆ ಹೆಚ್ಚಿನ ಬಸ್ ಸೇವೆ ಕಲ್ಪಿಸಲಾಗಿದೆ.

ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕ ಪ್ರಯಾಣಿಕರು ಸಾರಿಗೆ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ವ್ಯವಸ್ಥಾಪಕ ನಿರ್ದೇಶಕ ಎಂ.ಕೂರ್ಮರಾವ್ ಮನವಿ ಮಾಡಿದ್ದಾರೆ.

ಟಿಕೆಟ್ ದರದ ಮೇಲೆ ಶೇ.5 ಮತ್ತು 10 ರಷ್ಟು ರಿಯಾಯಿತಿ: ಈ ಸಾರಿಗೆಗಳಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಗಡವಾಗಿ ಆಸನ ಕಾಯ್ದಿರಿಸುವಾಗ 4 ಅಥವಾ 4 ಕ್ಕಿಂತ ಹೆಚ್ಚಿನ ಜನರ ಗುಂಪಿನ ಒಂದೇ ಟಿಕೆಟ್ ಪಡೆದುಕೊಂಡಲ್ಲಿ ಮೂಲ ಟಿಕೆಟ್ ದರದ ಶೇ.5 ರಷ್ಟು ರಿಯಾಯಿತಿ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲದೇ ಹೋಗುವಾಗ ಮತ್ತು ಬರುವಾಗಿನ ಆಸನಗಳನ್ನು ಒಮ್ಮೆಲೇ ಕಾಯ್ದಿರಿಸಿದಲ್ಲಿ ಬರುವಾಗಿನ ಮೂಲ ಟಿಕೆಟ್ ದರದ ಮೇಲೆ ಶೇ.10 ರಷ್ಟು ರಿಯಾಯಿತಿ ಸೌಲಭ್ಯ ಕಲ್ಪಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...