ಬಾಗಲಕೋಟೆ: ಬಸ್ ಹತ್ತುವಾಗ ನೂಕುನುಗ್ಗಲು ಉಂಟಾಗಿ ಚಾಲಕ ಕಂ ನಿರ್ವಾಹಕ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ನವನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.
45 ವರ್ಷದ ಗದಿಗ್ಯಪ್ಪ ಗಡ್ಡಿ ಮೃತಪಟ್ಟವರು ಎಂದು ಹೇಳಲಾಗಿದೆ. ಚಿಕ್ಕಮಗಳೂರು ಕೆಎಸ್ಆರ್ಟಿಸಿ ಡಿಪೋ ಸಿಬ್ಬಂದಿಯಾಗಿರುವ ಗದಿಗ್ಯಪ್ಪ ಬಸ್ ಚಕ್ರಕ್ಕೆ ಸಿಲುಕಿ ಅವರು ಸಾವನ್ನಪ್ಪಿದ್ದಾರೆ. ಬಾಗಲಕೋಟೆಯಿಂದ ಬಸ್ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ.
ಗದಿಗ್ಯಪ್ಪ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೌಜಗನೂರು ಗ್ರಾಮದ ನಿವಾಸಿಯಾಗಿದ್ದಾರೆ. ಬಾಗಲಕೋಟೆ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.