ಬೆಂಗಳೂರು: ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ನಿಯಂತ್ರಣ ತಪ್ಪಿದ ಖಾಸಗಿ ಬಸ್ ಫುಟ್ಪಾತ್ ಮೇಲೆ ಚಲಿಸಿದೆ.
ಬೆಂಗಳೂರಿನ ನಾಗವಾರ -ಹೆಣ್ಣೂರು ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಕೇವಲ ನಾಲ್ವರು ಮಾತ್ರ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದರು. ಸ್ಥಳಕ್ಕೆ ಬಾಣಸವಾಡಿ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎದೆನೋವು ಕಾಣಿಸಿಕೊಂಡ ಖಾಸಗಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.