ಬೆಂಗಳೂರು : ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆ ಬಂದ್ ಗೆ ಬೆಂಬಲ ನೀಡಿದ ಕೆಎಸ್ ಆರ್ ಟಿಸಿ ಬಸ್ ಚಾಲಕರಿಗೆ ಶಾಲು ಹೊದಿಸಿ ವ್ಯಂಗವಾಗಿ ಸನ್ಮಾನ ಮಾಡಲಾಗಿದೆ. ಚಿಕ್ಕಮಗಳೂರಲ್ಲಿ ಬಸ್ ನಿಲ್ದಾಣದ ಸಮೀಪ ರಸ್ತೆಗಿಳಿದ ಕೆಎಸ್ ಆರ್ ಟಿಸಿ ಬಸ್ ಗಳನ್ನು ನಿಲ್ಲಿಸಿ ಚಾಲಕರಿಗೆ ಶಾಲು ಹೊದಿಸಿ ಸನ್ಮಾನ ನೀಡಿ ಕಳುಹಿಸಲಾಗಿದೆ.
ರಾಜ್ಯದ ಹಲವು ಕಡೆ ‘ಕರ್ನಾಟಕ ಬಂದ್’ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್, ಆಟೋ ಸಂಚಾರ ಆರಂಭವಾಗಿದೆ. ಚಾಮರಾಜನಗರ, ಕಲಬುರಗಿ, ಹಾಸನ ಸೇರಿದಂತೆ ಹಲವು ಕಡೆ ಕರ್ನಾಟಕ ಬಂದ್’ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್, ಆಟೋ ಸಂಚಾರ ಆರಂಭವಾಗಿದೆ. ಅಂಗಡಿ ಮುಂಗಟ್ಟುಗಳು ಓಪನ್ ಆಗಿದೆ. ಜನರು ಎಂದಿನಂತೆ ತಮ್ಮ ತಮ್ಮ ಕೆಲಸಕ್ಕೆ ಹೋಗುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಬಿಸಿ ಏನು ತಟ್ಟಲಿಲ್ಲ. ಬೆಳಗಾವಿ , ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಬಲವಂತವಾಗಿ ಅಂಗಡಿ ಬಂದ್ ಮಾಡಿಸಲಾಗಿದೆ. ಕೆಲವು ಕಡೆ ಅಂಗಡಿಗಳನ್ನ ಬಂದ್ ಮಾಡುವಂತೆ ಪ್ರತಿಭಟನಾಕಾರರು ಅಂಗಡಿ ಅಂಗಡಿಗೆ ಹೋಗಿ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಒಂದೆಡೆ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಕನ್ನಡಪರ ಸಂಘಟನೆ ಹೋರಾಟಗಾರರು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆಯೊಡ್ಡಿದ್ದಾರೆ.