ಕಲಬುರಗಿ: ಹೊತ್ತಿ ಉರಿದ ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಸಜೀವ ದಹನವಾದ ಘಟನೆ ಕಲಬುರ್ಗಿ ಜಿಲ್ಲೆ ಕಮಲಾಪುರ ಹೊರವಲಯದಲ್ಲಿ ನಡೆದಿದೆ.
ಟೆಂಪೋಗೆ ಡಿಕ್ಕಿಯಾಗಿ ರಸ್ತೆ ಬದಿಗೆ ಉರುಳಿ ಬಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿತ್ತು. ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಉರುಳಿ ಬಿದ್ದ ವೇಳೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ತನ್ನ ಸ್ಥಳಕ್ಕೆ ಕಲ್ಬುರ್ಗಿ ಪೊಲೀಸ್ ವರಿಷ್ಠಾಧಿಕಾರಿ ಇಶಾಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.