alex Certify ಬಸ್ ನಲ್ಲಿ ಊರಿಗೆ ತೆರಳುವಾಗಲೇ ಹೃದಯಾಘಾತದಿಂದ ಮೃತಪಟ್ಟ ಪ್ರಯಾಣಿಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಲ್ಲಿ ಊರಿಗೆ ತೆರಳುವಾಗಲೇ ಹೃದಯಾಘಾತದಿಂದ ಮೃತಪಟ್ಟ ಪ್ರಯಾಣಿಕ

ಕಲಬುರಗಿ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಕಮಲಾಪುರ ಬಳಿ ನಡೆದಿದೆ.

ನಗರದ ಬಿದ್ದಾಪುರ ಕಾಲೋನಿ ನಿವಾಸಿ ವಿಜಯಕುಮಾರ್ ಶಿವಶರಣಪ್ಪ(45) ಮೃತಪಟ್ಟವರು ಎಂದು ಹೇಳಲಾಗಿದೆ. ಮೂಲತಃ ನಾಗನಹಳ್ಳಿಯವರಾದ ವಿಜಯಕುಮಾರ್ ಶಿವಶರಣಪ್ಪ ಜೆಸ್ಕಾಂನಲ್ಲಿ ಗುತ್ತಿಗೆ ಆಧಾರದಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಭಾಲ್ಕಿಯಲ್ಲಿರುವ ಸೋದರಿ ಮನೆಗೆ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಕಮಲಾಪುರ ಸಮೀಪ ಹೃದಯಘಾತವಾಗಿದೆ. ಕೂಡಲೇ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಮುಂದಾಗಿದ್ದು, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...