
ವಿಜಯಪುರ: ಡೀಸೆಲ್ ಬೆಲೆ ಭಾರಿ ಏರಿಕೆಯಾದ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ, ಬಸ್ ಪ್ರಯಾಣ ದರ ಹೆಚ್ಚಳ ಪ್ರಸ್ತಾವನೆ ಇಲ್ಲವೆಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲೇ ಕೊರೋನಾ ಕಾರಣದಿಂದ ಜನ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ದರ ಹೆಚ್ಚಳ ಮಾಡುವುದಿಲ್ಲ. ಕಳೆದ ವರ್ಷವೇ ಬಸ್ ಪ್ರಯಾಣ ದರ ಹೆಚ್ಚಳ ಮಾಡಲಾಗಿದ್ದು, ಈಗ ಮತ್ತೆ ಹೆಚ್ಚಳದ ಪ್ರಸ್ತಾಪವಿಲ್ಲ ಎಂದು ಅವರು ತಿಳಿಸಿದ್ದಾರೆ.