
ಲಖನೌ: ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ.
ಲಾರಿಯೊಂದು ಬಸ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 11 ಜನರು ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ.
ಬಸ್ ಉತ್ತರ ಪ್ರದೇಶದ ಸೀತಾಪುರದಿಂದ ಉತ್ತರಾಖಂಡದ ಪೂರ್ಣಂಗಿರಿಗೆ ತೆರಳುತ್ತಿದ್ದರು. ಬಸ್ ಶಹಜಾನ್ ಪುರದ ಬಳಿ ನಿಂತಿತು, ಈ ವೇಳೆ ಹಿಂಬದಿಯಿಂದ ಬಂದ ಲಾರಿ ನಿಯಂತ್ರಣ ಕಳೆದುಕೊಂಡು ಬಸ್ ಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ 40 ಜನರು ಪ್ರಯಾಣಿಸುತ್ತಿದ್ದರು.