ಹೈದರಾಬಾದ್: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ನಲ್ಲೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಮುಸನೂರು ಟೋಲ್ ಪ್ಲಾಜಾ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.