alex Certify BREAKING : ಬೆಳಗಾವಿಯಲ್ಲಿ ಮರಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ : 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಲ್ಲಿ ಮರಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ : 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ : ಬಸ್ ನ ಆಕ್ಸಲೇಟರ್ ಕಟ್ ಆಗಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಪರಿಣಾಮ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿದ್ದು, ಸುಮಾರು 50 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ರಾಮದುರ್ಗಕ್ಕೆ ಹೋಗುತ್ತಿದ್ದ ಬಸ್ ಚಲಿಸುತ್ತಿದ್ದಾಗ ಬಸ್ ನ ಆಕ್ಸೆಲ್ ಕಟ್ ಆಗಿದೆ. ಪರಿಣಾಮ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಬಸ್ ನಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದ್ದು, ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...