ಬೆಂಗಳೂರು: ಕೊರೋನಾ ಕಾರಣದಿಂದ ರಾಜ್ಯದಲ್ಲಿ ಬಂದ್ ಆಗಿದ್ದ ಕಾಲೇಜ್ ಗಳು ನವೆಂಬರ್ 17 ರಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ.
2019 -20 ನೇ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲದ ದೃಷ್ಟಿಯಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಪಾಸ್ ಅವಧಿಯನ್ನು ಡಿಸೆಂಬರ್ 10 ರ ವರೆಗೆ ವಿಸ್ತರಣೆ ಮಾಡಿದೆ. ಪ್ರಸಕ್ತ ಸಾಲಿನ ಶುಲ್ಕ ರಸೀದಿ ಜೊತೆಗೆ ಹಳೆ ಪಾಸ್ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಹೇಳಲಾಗಿದೆ.