ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ವತಿಯಿಂದ 2023 -24 ನೇ ಸಾಲಿನ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಿದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಇದಕ್ಕೆ ಯಾವುದೇ ಶುಲ್ಕ ಇರುವುದಿಲ್ಲ. ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಮೂಲಕ ಅರ್ಜಿ ಸಲ್ಲಿಸಲು ಅಲ್ಲಿನ ಸಿಬ್ಬಂದಿಗೆ 30 ರೂಪಾಯಿ ಸೇವಾ ಶುಲ್ಕ ಪಾವತಿಸಬೇಕಿದೆ.
ಅರ್ಜಿ ಸಲ್ಲಿಕೆಯ ನಂತರ ಮೊಬೈಲ್ ಗೆ ಪಾಸ್ ಪಡೆಯುವ ಕೌಂಟರ್ ಹೆಸರು, ವಿಳಾಸದ ಮಾಹಿತಿಯನ್ನು ಎಸ್ಎಂಎಸ್ ಮೂಲಕ ಕಳುಹಿಸಲಾಗುತ್ತದೆ. ನಂತರ ಕೌಂಟರ್ ಗಳಿಗೆ ತೆರಳಿ ವಿದ್ಯಾರ್ಥಿಗಳು ನಿಗದಿತ ಶುಲ್ಕವನ್ನು ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್, ಯುಪಿಐ ಮೂಲಕ ಪಾವತಿಸಿ ಬಸ್ ಪಾಸ್ ಪಡೆದುಕೊಳ್ಳಬಹುದು.
ವಿದ್ಯಾರ್ಥಿನಿಯರು ಬಸ್ ಪಾಸ್ ಗೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ಹೆಣ್ಣು ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದೆ. ನೆರೆ ರಾಜ್ಯದಲ್ಲಿ ವಾಸವಾಗಿದ್ದು, ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು, ರಾಜ್ಯದಲ್ಲಿ ವಾಸವಾಗಿದ್ದು, ಹೊರ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವವರು, ಗಡಿ ಭಾಗದ ಮಾರ್ಗಗಳಲ್ಲಿರುವ ವಿದ್ಯಾರ್ಥಿನಿಯರು ರಿಯಾಯಿತಿ ಬಸ್ ಪಾಸ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು. https://Sega’s in shudder vices.karnataka.gov.in ಗಮನಿಸಬಹುದು.
10 ತಿಂಗಳ ಅವಧಿಯ ವಿದ್ಯಾರ್ಥಿ ಪಾಸ್ ಪಡೆಯಲು ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು 150 ರೂ. ಪಾವತಿಸಬೇಕು. ಪ್ರೌಢಶಾಲೆ ಬಾಲಕರಿಗೆ ಸಾಮಾನ್ಯ ವರ್ಗದವರಿಗೆ 750 ರೂ., ಎಸ್.ಸಿ.,ಎಸ್.ಟಿ. ವಿದ್ಯಾರ್ಥಿಗಳಿಗೆ 150 ರೂ. ಶುಲ್ಕ ಪಾವತಿಸಬೇಕು.
ಕಾಲೇಜು, ಡಿಪ್ಲೋಮೋ ವಿದ್ಯಾರ್ಥಿಗಳಿಗೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 1050 ರೂ., ಎಸ್.ಸಿ., ಎಸ್.ಟಿ. ವಿದ್ಯಾರ್ಥಿಗಳಿಗೆ 150 ರೂ., ಐಟಿಐ 12 ತಿಂಗಳ ಪಾಸ್ ಗೆ ಸಾಮಾನ್ಯ ವರ್ಗದವರಿಗೆ 1,310 ರೂ., ಎಸ್ಸಿ,ಎಸ್ಟಿ ವಿದ್ಯಾರ್ಥಿಗಳಿಗೆ 160 ರೂ. ಶುಲ್ಕವಿದೆ.
10 ತಿಂಗಳ ಅವಧಿಯ ಪಾಸ್ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಸಾಮಾನ್ಯ ವರ್ಗದವರಿಗೆ 1,550 ರೂ., ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ 150 ರೂ., ಸಂಜೆ ಕಾಲೇಜು, ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಯ ಪಾಸ್ ಗೆ ಸಾಮಾನ್ಯ ವರ್ಗದವರಿಗೆ 1,350 ರೂ., ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ 150 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.