alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಗೆ ಅರ್ಜಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಿದೆ.

2020 – 21 ನೇ ಸಾಲಿನ ಸ್ಮಾರ್ಟ್ ಕಾರ್ಡ್ ಮಾದರಿಯ ರಿಯಾಯಿತಿ ಬಸ್ ಪಾಸ್ ಗಳನ್ನು ವಿತರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಅರ್ಜಿ ಆಹ್ವಾನಿಸಿದ್ದು, ಮೊದಲ ಹಂತದಲ್ಲಿ ಪದವಿ, ವೃತ್ತಿಪರ, ಸ್ನಾತಕೋತ್ತರ ಪದವಿ, ತಾಂತ್ರಿಕ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಪಾಸ್ ವಿತರಿಸಲಾಗುವುದು.

ಸೇವಾ ಸಿಂಧು ಪೋರ್ಟಲ್ ನಲ್ಲಿ ಹಾಗೂ ಬಿಎಂಟಿಸಿ ಜಾಲತಾಣದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಕೆ ನಂತರ ಶಿಕ್ಷಣ ಸಂಸ್ಥೆಗಳು ಅನುಮೋದಿಸಲಾದ ವಿದ್ಯಾರ್ಥಿಗಳು ಸಮೀಪದ ಬೆಂಗಳೂರು ಒನ್ ಕೇಂದ್ರ ಆಯ್ಕೆಮಾಡಿ ನಿಗದಿಪಡಿಸಬೇಕು. ನಂತರ ಪಾಸ್ ವಿತರಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...