ಬೆಂಗಳೂರು: ಸೆಪ್ಟೆಂಬರ್ 15 ರವರೆಗೆ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ವತಿಯಿಂದ ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತೆ ವಿಸ್ತರಿಸಿದ್ದು, ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.
ರಾಜ್ಯದಲ್ಲಿ 9 ರಿಂದ 12ನೇ ತರಗತಿ ಆರಂಭವಾಗಿದ್ದು, ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಹೋಗಿ ಬರಲು ಅನುಕೂಲವಾಗುವಂತೆ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ. ಇನ್ನು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಬಸ್ ಪಾಸ್ ಗಳನ್ನು ಪಡೆದುಕೊಳ್ಳಬಹುದಾಗಿದೆ.
ಕಳೆದ ವರ್ಷ ಬಸ್ ಪಾಸ್ ಪಡೆದುಕೊಳ್ಳದ ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಪ್ರವೇಶ ಪಡೆದ ರಶೀದಿ ಮತ್ತು ಸಂಸ್ಥೆಯ ಗುರುತಿನ ಚೀಟಿಯೊಂದಿಗೆ ಸೆಪ್ಟೆಂಬರ್ 15 ರವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.