ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳು ಶಾಲಾ, ಕಾಲೇಜು ಸಮಯಕ್ಕೆ ಸರಿಯಾಗಿ ಹೋಗಿಬರಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಇಲ್ಲವಾಗಿದೆ.
ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಅವರಿಗೆ ಶಾಲಾ ಸಮಯಕ್ಕೆ ಬಸ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಪೂರ್ಣಪ್ರಮಾಣದಲ್ಲಿ ಶಾಲಾ, ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಹೋಗಿಬರಲು ಕೆಎಸ್ಆರ್ಟಿಸಿ ಬಸ್ ಗಳ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ಗಳನ್ನು ನೀಡಲಾಗಿದೆ. ಆದರೆ, ಬಹುತೇಕ ಕಡೆ ಸರ್ಕಾರಿ ಬಸ್ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳ ವರದಿಯಲ್ಲಿ ತಿಳಿಸಲಾಗಿದೆ. ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಬಸ್ ಸಂಖ್ಯೆ ಹೆಚ್ಚಿಸಬೇಕೆಂದು ಸಚಿವರು ಮನವಿ ಮಾಡಿದ್ದಾರೆ.