alex Certify ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್: ಟಿಕೆಟ್ ರಿಯಾಯಿತಿ ಸೌಲಭ್ಯ ಮುಂದುವರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್: ಟಿಕೆಟ್ ರಿಯಾಯಿತಿ ಸೌಲಭ್ಯ ಮುಂದುವರಿಕೆ

ಕಲಬುರಗಿ: ಹಿರಿಯ ನಾಗರಿಕರ ಟಿಕೆಟ್ ರಿಯಾಯಿತಿ ಸೌಲಭ್ಯ ಮುಂದುವರಿಕೆ ಮಾಡಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ್ ಎಂ. ತಿಳಿಸಿದ್ದಾರೆ.

ಪ್ರಸ್ತುತ ಕೋವಿಡ್-19 ರ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆ ಹಾಗೂ ಹಿರಿಯ ನಾಗರಿಕರ ಮನವಿ ಮೇರೆಗೆ ಸಂಸ್ಥೆಯ ಬಸ್ ಗಳಲ್ಲಿ ಹಿರಿಯ ನಾಗರಿಕರಿಗೆ ನೀಡುವ ಟಿಕೆಟ್ ರಿಯಾಯಿತಿ ಹಾಗೂ ಪಾಸ್ ದರಗಳಲ್ಲಿನ ರಿಯಾಯಿತಿ ಸೌಲಭ್ಯವನ್ನು ಇದೇ ಡಿಸೆಂಬರ್ 10 ಜಾರಿಗೆ ಬರುವಂತೆ ಪುನರ್ ಪ್ರಾರಂಭಿಸಲಾಗಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಈ ಹಿಂದೆ ಸಂಸ್ಥೆಯ ಬಸ್ಸುಗಳಲ್ಲಿ ಹಿರಿಯ ನಾಗರಿಕರಿಗೆ ಒದಗಿಸಿದ ಶೇ.25 ರಷ್ಟು ಟಿಕೆಟ್ ರಿಯಾಯಿತಿ ಸೌಲಭ್ಯವನ್ನು ಹಿಂಪಡೆಯಲಾಗಿತ್ತು. 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಅವಶ್ಯವಿದ್ದಲ್ಲಿ ಮಾತ್ರ ಪ್ರಯಾಣಿಸಬೇಕು. ಹಿರಿಯ ನಾಗರಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...