alex Certify BREAKING NEWS: ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: 5 ಯಾತ್ರಾರ್ಥಿಗಳು ದುರ್ಮರಣ; 40ಕ್ಕೂ ಹೆಚ್ಚು ಜನ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: 5 ಯಾತ್ರಾರ್ಥಿಗಳು ದುರ್ಮರಣ; 40ಕ್ಕೂ ಹೆಚ್ಚು ಜನ ಗಂಭೀರ

ಪುಣೆ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.

ಯಾತ್ರಾರ್ಥಿಗಳು ಆಶಾಢ ಏಕಾದಶಿ ಹಿನ್ನೆಲೆಯಲ್ಲಿ ದೊಂಬಿವ್ಲಿಯಿಂದ ಪಂಡರಾಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ.

ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ನಸುಕಿನಜಾವ 1ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದಿದೆ. ಬಸ್ ನಲ್ಲಿ 80ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ನವಿಮುಂಬೈ ಪೊಲೀಸರು ತಿಳಿಸಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...