
ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ.
ಲಕ್ನೋ-ಆಗ್ರಾ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಾಯಾಳು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸೈಫಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ ಪಿ ಅಮಿತ್ ಕುಮಾರ್ ತಿಳಿಸಿದ್ದಾರೆ.
ಸ್ಲೀಪರ್ ಬಸ್ ಲಕ್ನೋದಿಂದ ಆಗ್ರಾದತ್ತ ಬರುತ್ತಿತ್ತು. ಈ ವೇಳೆ ರಾಂಗ್ ಸೈಡ್ ನಿಂದ ಬರುತ್ತಿದ್ದ ವಾಟರ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಬಸ್ ನಲ್ಲಿ ಸುಮಾರು 40 ಜನರು ಇದ್ದರು. ಸ್ಥಳದಲ್ಲೇ 7 ಜನರು ಸೇರಿ ಒಟ್ಟು 8 ಜನರು ಮೃತಪಟ್ಟಿದ್ದಾರೆ.