
ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಅದರಲ್ಲಿದ್ದ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಅಮರಾವತಿ – ನಾಗಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಬಸ್ಸಿನಲ್ಲಿ 35 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.
ಬಸ್ಸಿಗೆ ಬೆಂಕಿ ತಗುಲಿದ್ದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಯಾವ ಕಾರಣಕ್ಕೆ ಬೆಂಕಿ ತಗುಲಿದೆ ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.